ಸಿಎಸ್ಸಿ ಇ-ಗವರ್ನೆನ್ಸ್ ಸರ್ವೀಸಸ್ ಇಂಡಿಯಾ ಲಿಮಿಟೆಡ್

ಸರ್ಕಾರಿ ಸೇವಾ ಕೇಂದ್ರ

ಕಾಶಿಯಾತ್ರೆಗೆ ಹೋಗುವವರಿಗೆ 5,000 ರೂ. ಸಹಾಯಧನ :

ಕಾಶಿಯಾತ್ರೆಗೆ ಹೋಗುವವರಿಗೆ 5,000 ರೂ. ಸಹಾಯಧನ :


ಕಾಶಿ ಯಾತ್ರೆ


 ಪ್ರಧಾನಿ ನರೇಂದ್ರ ಮೋದಿ ಅವರ ಮುತುವರ್ಜಿಯಿಂದ ಅಭಿವೃದ್ದಿಗೊಂಡಿರುವ ಕಾಶಿಗೆ ಹೆಚ್ಚಿನ ಭಕ್ತರು ಸಂದರ್ಶಿಸಲಿ ಎನ್ನುವ ಉದ್ದೇಶದಿಂದ ಸಹಾಯಧನ ಯೋಜನೆಯನ್ನು ಪ್ರಾರಂಭಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.



ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಜರಾಯಿ ಇಲಾಖೆಯ ವತಿಯಿಂದ ರಾಜ್ಯದಿಂದ ಕಾಶಿ ಯಾತ್ರೆ ಕೈಗೊಂಡ ಯಾತ್ರಾರ್ಥಿಗಳಿಗೆ ಸಾಂಕೇತಿಕವಾಗಿ ಸಹಾಯಧನ ವಿತರಿಸಿ, ಡಿ.ಬಿ.ಟಿ ಮೂಲಕ ಆನ್‌ಲೈನ್‌ ಮೂಲಕ ಹಣ ವರ್ಗಾವಣೆಗೆ ಚಾಲನೆ ನೀಡಿ ಹಾಗೂ ಆನ್‌ಲೈನ್‌ ಮೂಲಕ ಅರ್ಜಿಸಲ್ಲಿಸುವ ವೆಬ್‌ ಪೋರ್ಟಲ್‌ ಲೋಕಾರ್ಪಣೆಗೊಳಿಸಿ ಮಾತನಾಡಿದರು.


ಇತ್ತೀಚೆಗೆ ಕಾಶಿಯನ್ನು ಮೋದಿಯವರು ನವೀಕರಣ ಮಾಡಿದ್ದಾರೆ. ಹಿಂದೆ ಕಾಶಿಗೆ ಹೋದರೆ ಅಲ್ಲಿನ ಅವ್ಯವಸ್ಥೆಯಿಂದ ಬೇಸರ ಉಂಟಾಗುತ್ತಿತ್ತು. ಆದರೆ ಈಗ ನೂರಕ್ಕೆ ನೂರು ಬದಲಾವಣೆ ಆಗಿದೆ. 23 ಘಾಟ್ ಗಳನ್ನು ಸ್ವಚ್ಚಗೊಳಿಸಿ ಬದಲಾವಣೆ ಮಾಡಲಾಗಿದೆ.

 ದೇವಸ್ಥಾನದ ಆವರಣ ಸ್ವಚ್ಚ ಗೊಳಿಸಿ ಭಕ್ತಿ ಮೂಡುವಂತೆ ಮಾಡಿದ್ದಾರೆ. ಕಾಲಕಾಲದಿಂದ ಕಾಶಿಗೆ ಹೋಗುವವರ ಸಂಖ್ಯೆ ಜಾಸ್ತಿಯಾಗಿದೆ. ಕಾಶಿಯಾತ್ರಿಕರಿಗೆ ಸಹಾಯ ಮಾಡಬೇಕು ಅಂತ ಜೊಲ್ಲೆಯವರು ಕಾರ್ಯಕ್ರಮ ರೂಪಿಸಲು ಮುಂದಾದರು. ನೇರ ಹಣ ವರ್ಗಾವಣೆ ಮಾಡುವ ಡಿಬಿಟಿ ಸಿಸ್ಟಮ್ ಜಾರಿಯಾಗಿದೆ. ಒಳ್ಳೆ ಕೆಲಸ ಮಾಡಿದ್ದಾರೆ, ಯಾತ್ರಿಕರ ಸಂಖ್ಯೆ ಹೆಚ್ಚಾಗುತ್ತದೆ ಅನುಕೂಲ ಆಗುತ್ತದೆ. ಎಂಡ್ ಟು ಎಂಡ್ ಬಹಳ ಒಳ್ಳೆಯ ಕೆಲಸ ಮಾಡಿದ್ದು, ರಾಜ್ಯದ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಕಾಶಿಗೆ ಸಂದರ್ಶಿಸಲಿ ಎಂದರು.


ದಿವ್ಯ ಕಾಶಿ – ಭವ್ಯ ಕಾಶಿಯಾಗಿ ಅನಾವರಣಗೊಂಡಿರುವ ಕಾಶಿಯನ್ನು ರಾಜ್ಯದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಸಂದರ್ಶಿಸಲಿ ಎನ್ನುವ ಉದ್ದೇಶದಿಂದ ಸಹಾಯಧನ ಯೋಜನೆಯನ್ನು ಪ್ರಾರಂಭಿಸಲಾಗಿದೆ. 


Thank you for contacting Spk Sevakendra!
 
ನಿಮ್ಮ ಸೇವೆಯೆ ನಮ್ಮ ಆಧ್ಯತೆ.  ಸರ್ಕಾರಿ ಸೇವೆಗಳಿಗೆ ಮತ್ತು ಯೋಜನೆಗಳಿಗೆ ನಮ್ಮ ಸರ್ಕಾರಿ ಸೇವಾಕೇಂದ್ರ ಪೇಜನ್ನು ಲೈಕ್ ಮಾಡಿ ಮತ್ತು ಎಲ್ಲರಿಗೂ ಮುಂಚೆ ಮಾಹಿತಿ ತಿಳಿದುಕೊಳ್ಳಿ.

 Facebook page- https://www.facebook.com/cscbangarpet1sevasindhu/

please provide your feed back >
Google map:-
https://g.page/spksevakendra/review?gm

Telegram link
https://t.me/bangarpetcsc

Twitter link:- https://twitter.com/cscbangarpet

Please Visit  www.sangeethaonline.in







ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ